ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಸದ್ಯ ಮಧ್ಯ ಪ್ರದೇಶದ ಪ್ರವಾಸದಲ್ಲಿದ್ದಾರೆ. ‘ರಾಮಾಯಣ’ ಸಿನಿಮಾ ಶೂಟ್ ಮುಂಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ಜೊತೆ ಯಶ್ ಮಾತುಕತೆ ನಡೆಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಖ್ಯಾತಿ ಹೆಚ್ಚಿದೆ. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ದೇಶದ ಯಾವುದೇ ಮೂಲೆಗೆ ಹೋದರೂ ಯಶ್ ಅವರನ್ನು ಗುರುತಿಸುತ್ತಾರೆ. ಕೇವಲ ದೇಶ ಮಾತ್ರವಲ್ಲ, ವಿದೇಶದಲ್ಲೂ ಯಶ್ಗೆ ಅಭಿಮಾನಿ ಬಳಗ ಇದೆ.