ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ ಹಾಗೂ ದೇಶಿ ಕ್ರಿಕೆಟ್‌ ನಲ್ಲಿ ಕರ್ನಾಟಕ ತಂಡ ವನ್ನು ಪ್ರತಿನಿಧಿಸಿದ ದಿಗ್ಗಜ ಕ್ರಿಕೆಟಿಗ ರೋಜರ್ ಬಿನ್ನಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 36 ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು 2019 ರಿಂದ ಈ ಹುದ್ದೆಯಲ್ಲಿದ್ದ ಸೌರವ್ ಗಂಗೂಲಿ ಅವರ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಮುಂಬೈನಲ್ಲಿ ನಡೆದ ಬಿಸಿಸಿಐನ 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷರನ್ನಾಗಿ ಬಿನ್ನಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಿಲಾಗಿದೆ. ಈ ಉನ್ನತ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ಅಭ್ಯರ್ಥಿ ಬಿನ್ನಿ ಅವರಾಗಿದ್ದರು. ಹಾಲಿ ಕಾರ್ಯದರ್ಶಿ ಜಯ್ ಶಾ ಮಂಡಳಿಯಲ್ಲಿ ಅದೇ ಹುದ್ದೆಯಲ್ಲಿ ಎರಡನೇ ಅವಧಿಗೆ ಮುಂದುವರಿಯಲಿದ್ದಾರೆ.
67 ವರ್ಷದ ಬಿನ್ನಿ 27 ಟೆಸ್ಟ್ ಪಂದ್ಯಗಳು ಮತ್ತು 72 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅವರು 1983 ರ ಭಾರತದ ವಿಶ್ವಕಪ್ ವಿಜಯದ ವಾಸ್ತುಶಿಲ್ಪಿಗಳಲ್ಲಿ ಒಬ್ಬರಾಗಿದ್ದಾರೆ. ಈ ಹಿಂದೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಜೊತೆಗೆ ಬಿಸಿಸಿಐ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಅವರು ವಿಜಯನಗರದ ಮಹಾರಾಜ, ಸೌರವ್ ಗಂಗೂಲಿ ಬಳಿಕ ಬಿಸಿಸಿಐ ನೇತೃತ್ವ ವಹಿಸಿದ ಮೂರನೇ ಟೆಸ್ಟ್ ಕ್ರಿಕೆಟಿಗ ಎಂಬ ಖ್ಯಾತಿಗೆ ಭಾಜನರಾಗಲಿದ್ದಾರೆ. ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಉತ್ತರಾಧಿಕಾರಿಯಾಗಿ ಬಿಜೆಪಿ ಶಾಸಕ ಆಶಿಶ್ ಶೆಲಾರ್ ನೇಮಿಸಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂದಿನ ಅಧ್ಯಕ್ಷರಾಗಿ ಅರುಣ್ ಧುಮಾಲ್ ನೇಮಕವಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!