ರೋಹಿಣಿ ಸಿಂಧೂರಿ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಡಿ.ರೂಪಾ ಮರಳಿ ಹೈಕೋರ್ಟ್ ನತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಐಎಎಸ್ ರೋಹಿಣಿ ಸಿಂಧೂರಿ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಐಪಿಎಸ್ ಡಿ.ರೂಪಾ ಮೌದ್ಗಿಲ್ ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯದಿದ್ದರೆ ವಜಾ ಮಾಡುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದ ಬಳಿಕ ಅರ್ಜಿ ವಾಪಸ್ ಪಡೆದಿದ್ದಾರೆ.

ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲು ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ರೂಪಾ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾ. ಎ.ಎಸ್ ಓಕಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಡಿ.ರೂಪಾ ಪರ ವಕೀಲರು ಮಧ್ಯವರ್ತಿಗಳ ಮಧ್ಯಸ್ಥಿಕೆಯಲ್ಲಿ ಪರಸ್ಪರ ಕ್ಷಮೆಯಾಚನೆಗೆ ಮನವಿ ಮಾಡಿದರು. ಇದಕ್ಕೆ ಒಪ್ಪದ ರೋಹಣಿ ಸಿಂಧೂರಿ ಪರ ವಕೀಲರು ಅವರಿಂದ ತಪ್ಪಾಗಿದೆ ಹೀಗಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಿದರೆ ಮಾನನಷ್ಟ ಕೇಸ್ ಅರ್ಜಿ ವಾಪಸ್ ಪಡೆಯುವುದಾಗಿ ವಾದಿಸಿದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಧೀಶರು ಇಬ್ಬರು ಕೋರ್ಟ್‌ನಲ್ಲಿದ್ದೀರಿ ಪರಸ್ಪರ ಮಾತನಾಡಿಕೊಳ್ಳಬಹುದೇ ಅಥವಾ ಹಿರಿಯ ವಕೀಲರು ಅಥವಾ ನಿವೃತ್ತ ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ರಾಜೀ ಸಂಧಾನ ಮಾಡಬಹುದೇ ಎಂದು ಪ್ರಸ್ತಾಪ ಮಾಡಿತು. ಕೆಲ ಕಾಲ ಮಾತುಕತೆಗೂ ಅವಕಾಶ ನೀಡಿ ವಿಚಾರಣೆ ಮುಂದೂಡಿತು.

ಕೆಲ ಹೊತ್ತಿನ ಬಳಿಕ ಡಿ.ರೂಪಾ ಮಾತುಕತೆ ವಿಫಲವಾಯಿತು ಎಂದರು. ಇದಕ್ಕೆ ಕಾರಣ ಏನು ಎಂದು ನ್ಯಾಯಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರೂಪಾ ನಾನು ಬೇಷರತ್‌ದ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ರೋಹಿಣಿ ಸಿಂಧೂರಿ, ಡಿ.ರೂಪಾ ನನ್ನ ಮೇಲೆ ಮಾಡಿದ ಆರೋಪಗಳು ಇನ್ನೂ ಸಾಮಾಜಿಕ ಜಾಲತಾಣದಲ್ಲಿದೆ. ಕೋರ್ಟ್ ಆದೇಶದ ಬಳಿಕವೂ ರೂಪಾ ಡಿಲೀಟ್ ಮಾಡಿಲ್ಲ ಎಂದು ವಾದಿಸಿದರು.

ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ವರ್ತಿಸಬಾರದು. ಮಾತುಕತೆಗೆ ಒಪ್ಪದಿದ್ದರೆ ನಾವು ಏನು ಮಾಡಬಹುದು. ಅರ್ಹತೆ ಮೇಲೆ ವಿಚಾರಣೆ ನಡೆಸಬಹುದು ಎಂದು ಕೋರ್ಟ್ ಆಕ್ಷೇಪ ವ್ಯಕ್ತಪಡಿತು. ಅಂತಿಮವಾಗಿ ಇಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ವಿಚಾರಣಾಧೀನ ನ್ಯಾಯಲಯದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚನೆ ನೀಡಿತು. ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ ಡಿ.ರೂಪಾ ತಮ್ಮ ಅರ್ಜಿ ವಾಪಸ್ ಪಡೆದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!