Friday, August 12, 2022

Latest Posts

ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ನಿಂದ ರೋಹಿತ್ ಔಟ್: ಟೀಮ್ ಇಂಡಿಯಾದ ಸಾರಥಿಯಾಗಿ ಬುಮ್ರಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜುಲೈ 1ರಿಂದ ಇಂಗ್ಲೆಂಡ್​ ವಿರುದ್ಧ ಟೀಂ ಇಂಡಿಯಾ 5ನೇ ಟೆಸ್ಟ್​ ಪಂದ್ಯ ಆಡಲು ಸಜ್ಜಾಗಿದ್ದು, ಕೊರೋನಾದಿಂದ ನಾಯಕ ರೋಹಿತ್ ಶರ್ಮಾ ಹೊರಬಿದ್ದಿದ್ದು, ನಾಯಕತ್ವದ ಜವಾಬ್ದಾರಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೆಗಲಿಗೆ ಬಿದ್ದಿದೆ .
ಕೋವಿಡ್​ನಿಂದ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.28ರ ಹರೆಯದ ಬುಮ್ರಾ ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉಪನಾಯಕನಾಗಿ ಕಾರ್ಯನಿರ್ವಹಿಸಿದ್ದು, ಇದೀಗ ನಾಯಕತ್ವ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಇಂಗ್ಲೆಂಡ್​ ವಿರುದ್ಧದ ಐದು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊನೆಯ ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸಿದಾಗ ಮಾತ್ರ ಸರಣಿ ಭಾರತದ ಪಾಲಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss