ಐಸಿಸಿ ವರ್ಷದ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ಸಾರಥಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಐಸಿಸಿ ವರ್ಷದ ಏಕದಿನ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ವೇಗದ ಬೌಲರ್ಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ವರ್ಷದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ರೋಹಿತ್ ಮತ್ತು ಗಿಲ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಲಾಗಿದ್ದು, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ ಟ್ರಾವಿಸ್ ಹೆಡ್ 3ನೇ ಕ್ರಮಾಂಕದಲ್ಲಿ ಆಯ್ಕೆಯಾಗಿದ್ದಾರೆ. ಕೊಹ್ಲಿ, ಡ್ಯಾರಿಲ್ ಮಿಚೆಲ್ (ನ್ಯೂಜಿಲೆಂಡ್), ಹೆನ್ರಿಕ್ ಕ್ಲಾಸೆನ್ (ದಕ್ಷಿಣ ಆಫ್ರಿಕಾ) ಮತ್ತು ಮಾರ್ಕೊ ಜಾನ್ಸೆನ್ (ದಕ್ಷಿಣ ಆಫ್ರಿಕಾ) ಮಧ್ಯಮ ಕ್ರಮಾಂಕದ ಭಾಗವಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!