ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ನಡೆಸಿ 228 ರನ್ಗಳ ಬೃಹತ್ ಮೊತ್ತ ಕಲೆಯಾಕಿದೆ.
ರೋಹಿತ್ ಶರ್ಮಾ ಸಿಡಿಲಬ್ಬರದ ಅರ್ಧಶತಕ , ಬದಲಿ ಆಟಗಾರನಾಗಿ ತಂಡ ಸೇರಿಕೊಂಡಿದ್ದ ಇಂಗ್ಲೆಂಡ್ ಜಾನಿ ಬೈರ್‌ಸ್ಟೋವ್ 44 ರನ್, ಸೂರ್ಯಕುಮಾರ್ ಯಾದವ್ 33, ತಿಲಕ್ ವರ್ಮಾ 25, ಹಾರ್ದಿಕ್ ಪಾಂಡ್ಯ ಅಜೇಯ 22 ರನ್ಗಳಿಸಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ಗೆ ರೋಹಿತ್ ಶರ್ಮಾ ಹಾಗೂ ಬೈರ್‌ಸ್ಟೋವ್ ಭರ್ಜರಿ ಆರಂಭ ನೀಡಿದರು. ಜಾನಿ ಬೈರ್‌ಸ್ಟೋವ್ 22 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ಗಳ ಸಹಿತ 47 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಸೂರ್ಯಕುಮಾರ್ ಯಾದವ್ 20 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ಗಳ ಸಹಿತ 33 ರನ್ ಗಳಿಸಿ ಔಟಾದರು.
28 ಎಸೆತಗಳಲ್ಲಿ 47ನೇ ಅರ್ಧಶತಕ ಪೂರೈಸಿದ ರೋಹಿತ್ ಶರ್ಮಾ 50 ಎಸೆತಗಳಲ್ಲಿ 9 ಬೌಂಡರಿ, 4 ಸಿಕ್ಸರ್ಗಳ ನೆರವಿನಿಂದ 81 ರನ್ಗಳಿಸಿ ಪ್ರಸಿಧ್ ಕೃಷ್ಣಗೆ ವಿಕೆಟ್ ನೀಡಿದರು. ತಿಲಕ್ ವರ್ಮಾ 11 ಎಸೆತಗಳಲ್ಲಿ 3 ಸಿಕ್ಸರ್ ಜೊತೆ 25 ರನ್ಗಳಿಸಿ ಸಿರಾಜ್ ಬೌಲಿಂಗ್ನಲ್ಲಿ ಕುಸಾಲ್ ಮೆಂಡಿಸ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಮನ್ ಧೀರ್ 6 ಎಸೆತಗಳಲ್ಲಿ 9 ರನ್ಗಳಿಸಿ ಔಟ್ ಆದರು. ಆದರೆ ಕೊನೆಯ ಓವರ್ನಲ್ಲಿ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ ಅಜೇಯ 22 ರನ್ಗಳಿಸಿ ತಂಡದ ಮೊತ್ತವನ್ನ 200 ರ ಗಡಿ ದಾಟಿಸಿದರು.