ವಿಶ್ವಕಪ್‌ ಗೆದ್ದ ಖುಷಿಯಲ್ಲಿ ಪಾಂಡ್ಯ ಕೆನ್ನೆಗೆ ಪ್ರೀತಿಯ ಸಿಹಿ ಮುತ್ತಿಟ್ಟ ರೋಹಿತ್‌ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳಿಂದ ಜಯಗಳಿಸಿದ ಟೀಂ ಇಂಡಿಯಾ 17 ವರ್ಷಗಳ ನಂತರ ವಿಶ್ವಕಪ್ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ.

ಟೀಂ ಇಂಡಿಯಾದ ಈ ರೋಚಕ ಗೆಲುವನ್ನು ಇಡೀ ಭಾರತವೇ ಸಂಭ್ರಮಿಸುತ್ತಿದೆ. ರೋಹಿತ್ ಶರ್ಮಾ ಗೆಲುವಿನ ನಂತರ ಮೈದಾನದಲ್ಲಿ ಹಾರ್ದಿಕ್ ಪಾಂಡ್ಯ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒಂದೆಡೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಮತ್ತೊಂದೆಡೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ನಿವೃತ್ತಿಯ ಬಗ್ಗೆ ಉತ್ಸುಕರಾಗಿದ್ದರು ಮತ್ತು ರೋಹಿತ್ ಶರ್ಮಾ ಪಾಂಡ್ಯ ಅವರನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತಿಟ್ಟರು. ಈ ಭಾವನಾತ್ಮಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!