ಹೊಸ ದಾಖಲೆ ಬರೆಯಲು ರೋಹಿತ್ ಶರ್ಮಾಗೆ ಬೇಕಿದೆ ಕೇವಲ 10 ರನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಏಷ್ಯಾಕಪ್ ಟೂರ್ನಿಯಲ್ಲಿಂದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಸೆಣಸಾಡಲಿವೆ.

ಕಳೆದ ವರ್ಷ ಇದೇ ಮೈದಾನದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಕಾದಾಟದಲ್ಲಿ ಭಾರತ ತಂಡವು ಪಾಕಿಸ್ತಾನ ಎದುರು 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿತ್ತು. ಇದೀಗ ಟೀಂ ಇಂಡಿಯಾ ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಇನ್ನು ಇದೇ ವೇಳೆ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಇದೇ ಪಂದ್ಯವು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡುತ್ತಿರುವ 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯ ಎನಿಸಿರುವುದರಿಂದಾಗಿ ಎಲ್ಲರ ಚಿತ್ತ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನತ್ತ ನೆಟ್ಟಿದೆ. ಇದರ ಹೊರತಾಗಿಯೂ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ನೆಡಲು ಸಜ್ಜಾಗಿದ್ದಾರೆ.

ಸದ್ಯ ನ್ಯೂಜಿಲೆಂಡ್ ಅನುಭವಿ ಆರಂಭಿಕ ಬ್ಯಾಟರ್‌ ಮಾರ್ಟಿನ್ ಗಪ್ಟಿಲ್‌, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3,497 ರನ್‌ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3,487 ರನ್ ಬಾರಿಸಿದ್ದು, ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 10 ರನ್ ಬಾರಿಸಿದರೇ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಗಪ್ಟಿಲ್‌ ಹಿಂದಿಕ್ಕಿ ರೋಹಿತ್ ಶರ್ಮಾ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಲಿದ್ದಾರೆ. ಇನ್ನು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ 99 ಟಿ20 ಪಂದ್ಯಗಳಿಂದ 3,308 ರನ್‌ ಬಾರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!