ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ ಗೂ ರೋಹಿತ್ ಶರ್ಮ ಇಲ್ಲ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಖುಷಿಯಲ್ಲಿರುವ ಟೀಮ್ ಇಂಡಿಯಾ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಆದ್ರೆ ಎರಡನೇ ಪಂದ್ಯಕ್ಕೂ ನಾಯಕ ರೋಹಿತ್ ಶರ್ಮಾ ತಂಡದ ಜೊತೆಯಾಗುವುದು ಡೌಟ್ ಆಗಿದೆ.

ರೋಹಿತ್ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ, ಹಾಗಾಗಿ ಅವರು ಬಾಂಗ್ಲಾದೇಶಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಇದರಿಂದ ಎರಡನೇ ಟೆಸ್ಟ್‌ನಲ್ಲೂ ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.

ಬಾಂಗ್ಲಾ ವಿರುದ್ಧ ಏಕದಿನ ಸರಣಿಯಲ್ಲಿ ಗಾಯಗೊಂಡಿದ್ದ ರೋಹಿತ್ ಶರ್ಮಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಆದರೆ ಎರಡನೇ ಪಂದ್ಯಕ್ಕಾಗಿ ಬಾಂಗ್ಲಾದೇಶಕ್ಕೆ ತೆರಳುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೀಗ ಬಾಂಗ್ಲಾದೇಶ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ ರೋಹಿತ್ ಇಲ್ಲದೆ ಟೀಂ ಇಂಡಿಯಾ ಕಣಕ್ಕಿಳಿಯುವುದು ಖಚಿತವಾಗಿದೆ.

ಡಿಸೆಂಬರ್ 22 ರಿಂದ ಬಾಂಗ್ಲಾದೇಶ ವಿರುದ್ಧ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯವನ್ನು ಆಡಬೇಕಿದೆ. ಈ ಪಂದ್ಯ ಮೀರ್‌ಪುರದಲ್ಲಿ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!