ಎಲ್ಲಾ ಮಾದರಿಯ ಕ್ರಿಕೆಟ್​ಗೆ ರೋಹಿತ್​ ಶರ್ಮಾ ನಿವೃತ್ತಿ ಘೋಷಣೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂಬರುವ ಟಿ-20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಮಾತುಗಳು ಕೇಳಿಬರುತ್ತಿದೆ.

ಈ ಕುರಿತು ರೋಹಿತ್ ಮಾತನಾಡಿದ್ದು, ಗೌರವ್ ಕಪೂರ್ ಮತ್ತು ಎಡ್ ಶೆರಿನ್​ ನೆಡೆಸಿಕೊಡುವ ಬ್ರೇಕ್‌ಫಾಸ್ಟ್ ವಿತ್ ಚಾಂಪಿಯನ್ಸ್ (BWC)ನಲ್ಲಿ ನಿವೃತ್ತಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

‘ನಾನು ನಿವೃತ್ತಿಯ ಬಗ್ಗೆ ಈಗಲೇ ಏನೂ ಯೋಚನೆ ಮಾಡಿಲ್ಲ. ಜೀವನವು ನಿಮ್ಮನ್ನು ಎಲ್ಲಿಗೆ ಕರೆದೊಯ್ಯುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪ್ರಸ್ತುತ ನಾನು ಚೆನ್ನಾಗಿ ಆಡುತ್ತಿದ್ದು, ಮುಂದಿನ ಕೆಲ ವರ್ಷಗಳ ಕಾಲ ಆಡಲಿದ್ದೇನೆ. ನಾನು ಭಾರತಕ್ಕಾಗಿ ನಿಜವಾಗಿಯೂ ವಿಶ್ವಕಪ್​ ಗೆಲ್ಲಿಸಿಕೊಡಲು ಬಯಸುತ್ತೇನೆ ಎಂದು ಹೇಳುವ ಮೂಲಕ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ತಮ್ಮ ನಿವೃತ್ತಿ ಕುರಿತು ಸುದ್ದಿಗೆ ತೆರೆ ಎಳೆದಿದ್ದಾರೆ.

2023ರಲ್ಲಿ ನಡೆದ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲಿನ ಬಳಿಕ ಟೀಮ್​ ಇಂಡಿಯಾ ನಾಯಕ ಚುಟುಕು ವಿಶ್ವಸಮರದ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಮೌನ ಮುರಿದಿರುವ ರೋಹಿತ್​ 2027ರಲ್ಲಿ ನಡೆಯಲಿರುವ ವಿಶ್ವವಕಪ್​ ಆಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!