ಟೀಮ್ ಇಂಡಿಯಾಗೆ ಶಾಕ್: ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಉಳಿದಿರುವಾಗ ರೋಹಿತ್‌ಗೆ ಕೋವಿಡ್ ಕಾಣಿಸಿಕೊಂಡಿದ್ದು, ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಸೋಂಕು ದೃಢಪಟ್ಟಿದೆ. ಸಧ್ಯ ಅವರನ್ನು ಕ್ವಾರಂಟೈನ್‌ಗೆ ಳಪಡಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ರಾಪಿಡ್ ಆಂಟಿಜಿನ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-೧೯ ದೃಢಪಟ್ಟಿದೆ.  ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡ ಅವರ ಆರೈಕೆಯಲ್ಲಿದೆ ಎಂದು ಬರೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!