ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್‌ಗಳಿಂದ ಸೋಲು ಕಂಡಿದೆ.
ಭಾರತ ತಂಡ ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಟೀಮ್ ಇಂಡಿಯಾ ಪರ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಟೀಮ್ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬೀಳುವ ಸಾಧ್ಯತೆ ಇದೆ.
ಇತ್ತ ಭಾರತ ತಂಡದ ಸೋಲಿಗೆ ಪ್ರಮುಖ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ ಎನ್ನಲಾಗುತ್ತಿದೆ. ಇವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಹೇಳಿಕೊಳ್ಳುವಷ್ಟು ಪ್ರದರ್ಶನ ನೀಡಲಿಲ್ಲ. ಮೆಲ್ಬೋರ್ನ್ ಟೆಸ್ಟ್ ಪಂದ್ಯದ 2 ಇನ್ನಿಂಗ್ಸ್ನಲ್ಲಿ 3 ಮತ್ತು 9 ರನ್ ಗಳಿಸಿ ಟೀಮ್ ಇಂಡಿಯಾ ಸೋಲಿಗೆ ಕಾರಣರಾದರು. ರೋಹಿತ್ ತಾನು ಆಡಿರೋ 3 ಪಂದ್ಯಗಳಲ್ಲಿ ಕೇವಲ 31 ರನ್ ಕಲೆ ಹಾಕಿದ್ದಾರೆ.
ಟೀಮ್ ಇಂಡಿಯಾ ಸೋತ ಬೆನ್ನಲ್ಲೇ ಕ್ಯಾಪ್ಟನ್ ರೋಹಿತ್ ಶರ್ಮಾ ವಿರುದ್ಧ ಹತ್ತಾರು ಟೀಕೆಗಳು ಕೇಳಿ ಬಂದಿವೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಕ್ಯಾಪ್ಟನ್ ರೋಹಿತ್ ಶರ್ಮಾ ನಿವೃತ್ತಿ ಆಗಲಿದ್ದಾರೆ ಎನ್ನಲಾಗಿತ್ತು.
ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ 5 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಮುಗಿದ ಬೆನ್ನಲ್ಲೇ ಕ್ಯಾಪ್ಟನ್ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರಂತೆ. ಬಿಸಿಸಿಐ ಮತ್ತು ಸೆಲೆಕ್ಷನ್ ಕಮಿಟಿ ಜತೆ ಚರ್ಚಿಸಿದ ನಂತರ ರೋಹಿತ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸಿಡ್ನಿ ಟೆಸ್ಟ್ ನಂತರ ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ.
ರೋಹಿತ್ ಶರ್ಮಾ ಏನಂದ್ರು?
ಇವತ್ತು ನಾನು ಇಲ್ಲೇ ನಿಂತಿದ್ದೇನೆ. ಹಿಂದೆ ಏನಾಯಿತು ಎಂದು ಯೋಚಿಸುವ ಅಗತ್ಯವಿಲ್ಲ. ಕೆಲವು ಫಲಿತಾಂಶಗಳು ನಮ್ಮ ಪರವಾಗಿ ಬರಲ್ಲ. ಇದು ನಾಯಕನಾಗಿ ನನಗೆ ನಿರಾಸೆ ತಂದಿದೆ. ನಾನು ಮಾನಸಿಕವಾಗಿ ನಿಸ್ಸಂದೇಹವಾಗಿ ತೊಂದರೆ ಒಳಗಾಗಿದ್ದೇನೆ. ನನ್ನ ಕನಸು ಈಡೇರದಿದ್ರೆ ಒಂದು ನಿರ್ಧಾರಕ್ಕೆ ಬರುತ್ತೇನೆ ಎಂದರು.