ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನ ಫೈನಲ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದ್ದು, ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ.
ಒಂದು ವೇಳೆ ಫೈನಲ್ ಪಂದ್ಯದಲ್ಲಿ ಸೋತರೆ? ಈ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಉತ್ತರ ನೀಡಿದ್ದಾರೆ.
ಭಾರತ ತಂಡವು ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿರುವ ಗಂಗೂಲಿ, ಈ ಬಾರಿ ಸೋಲುವ ಮಾತೇ ಇಲ್ಲ ಎಂದಿದ್ದಾರೆ. ಒಂದು ವೇಳೆ ಸೋತರೆ ಬಹುಶಃ ರೋಹಿತ್ ಶರ್ಮಾ ಬಾರ್ಬಡೋಸ್ ಸಮುದ್ರಕ್ಕೆ ಹಾರಬಹುದು ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.
ಇನ್ನು ಮಾತು ಮುಂದುವರೆಸಿದ ಸೌರವ್ ಗಂಗೂಲಿ, ಟೀಮ್ ಇಂಡಿಯಾ ಸೋಲುವ ವಿಚಾರವೇ ಇಲ್ಲಿ ಬರಲ್ಲ. ಏಕೆಂದರೆ ಟೂರ್ನಿಯುದ್ದಕ್ಕೂ ಭಾರತೀಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಫೈನಲ್ನಲ್ಲೂ ಅದ್ಭುತ ಪ್ರದರ್ಶನ ಮುಂದುವರೆಸುತ್ತಾರೆ. ನಾನು ಸಹ ಟೀಮ್ ಇಂಡಿಯಾ ಗೆಲ್ಲಲಿ ಎಂದು ಹಾರೈಸುತ್ತೇನೆ. ಅದರಲ್ಲೂ ರೋಹಿತ್ ಶರ್ಮಾ ವಿಶ್ವಕಪ್ ಎತ್ತಿ ಹಿಡಿಯಲಿ ಎಂದು ಬಯಸುತ್ತೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.