ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರೋಹಿತ್​ ವೇಮುಲ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ, ಆದರೂ ಪ್ರಧಾನಿ ಅವರನ್ನೇ ಬ್ಲೇಮ್​ ಮಾಡ್ತಾರೆ: ಸಿ.ಟಿ.ರವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ಪ್ರತಿಕ್ಷಗಳಿಗೆ ಸಿಕ್ಕಾಪಟ್ಟೆ ಹೊಟ್ಟೆಕಿಚ್ಚಿದೆ.ಅದಕ್ಕಾಗಿ ಪ್ರತಿಯೊಂದಕ್ಕೂ ಮೋದಿ ಅವರನ್ನೇ ಬ್ಲೇಮ್​ ಮಾಡ್ತಾರೆ ಎಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ರಾಜ್ಯರೈತ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿ.ಟಿ. ರವಿ, 2016ರ ಜನವರಿ 17ರಂದು ನಡೆದಿದ್ದ ಹೈದರಾಬಾದ್​ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್​ ವೇಮುಲ ಆತ್ಮಹತ್ಯೆ ಪ್ರಕರಣವನ್ನು ನೆನಪಿಸಿಕೊಂಡು ಮಾತನಾಡಿದರು.
ರೋಹಿತ್​ ವೇಮುಲ ಸಾವಿನ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು, ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪಿಎಚ್​ಡಿ ಓದುತ್ತಿದ್ದ ವೇಮುಲನನ್ನು ಹಾಸ್ಟೆಲ್​ನಿಂದ ಹೊರಹಾಕಲಾಗಿತ್ತು. ಇದೇ ಕಾರಣಕ್ಕೆ ಮನನೊಂದ ವೇಮುಲ ಸಾವಿನ ಮನೆಯ ಕದ ತಟ್ಟಿದ್ದ ಎಂಬ ಗಂಭೀರ ಆರೋಪವೂ ಕೇಳಿಬಂದಿತ್ತು.
ಆದರೆ ರೋಹಿತ್​ ವೇಮುಲ ಸತ್ತತ್ತು ಪ್ರೇಮ ವೈಫಲ್ಯದಿಂದ. ಆದರೂ, ಕೆಲವರು ಈ ಸಾವಲ್ಲೂ ಮೋದಿ ಮೇಲೆ ಗೂಬೆ ಕೂರಿಸಲು ಯತ್ನಿಸಿದ್ದರು. ವಿಪಕ್ಷಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ದಲಿತರಿಗೆ ರಕ್ಷಣೆ ಇಲ್ಲ ಎಂದು ಅಶಾಂತಿ ಸೃಷ್ಟಿಸಿದ್ದರು. ಆದರೆ ತನಿಖೆಯಲ್ಲಿ ಸಾವಿನ ಕಾರಣ ಬಯಲಾಯ್ತು. ಈ ಪ್ರಕರಣವೇ ಸಾಕ್ಷಿ ನರೇಂದ್ರ ಮೋದಿ ಅವರನ್ನ ಕಂಡರೆ ವಿಪಕ್ಷಗಳಿಗೆ ಅದೆಷ್ಟು ದ್ವೇಷ, ಹೊಟ್ಟೆಕಿಚ್ಚು ಇದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss