ಭಾರತಕ್ಕೆ 96 ರನ್​ಗಳ ಭರ್ಜರಿ ಜಯ: ಕ್ಲೀನ್ ಸ್ವೀಪ್ ಮಾಡಿ ಸರಣಿ ಗೆದ್ದ ರೋಹಿತ್ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಭಾರತ ತಂಡವ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು ಸುಳಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಭಾರತ ನೀಡಿದ್ದ 266 ರನ್​ಗಗಳ ಗುರಿ ಬೆನ್ನತ್ತಿದ್ದ ವೆಸ್ಟ್​ ಇಂಡೀಸ್​ ಕೇವಲ 169 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಸೋಲು ಅನುಭವಿಸಿತು.ಈ ಮೂಲಕ ಭಾರತ 96 ರನ್​ಗಳ ಗೆಲುವು ಸಾಧಿಸಿದೆ.
ವೆಸ್ಟ್ ಇಂಡೀಸ್ ಪರ ನಿಕೋಲಸ್ ಪೂರನ್ 34 ಮತ್ತು ಓಡಿನ್ ಸ್ಮಿತ್ 36 ರನ್ ಗಳಿಸಿದರೆ ಮತ್ತೆ ಯಾವ ಆಟಗಾರರು ಉತ್ತಮ ಬ್ಯಾಟಿಂಗ್ ನಡೆಸಿಲ್ಲ. ಭಾರತ ಪರ ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಪ್ರಶಾಂತ್ ಕೃಷ್ಣ ಮತ್ತು ಕುಲದೀಪ್ ಯಾದವ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!