ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಶಾಲಾದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಎರಡನೇ ಟಿ 20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸುವುದರ ಜತೆಗೆ ರೋಹಿತ್ ಶರ್ಮಾ ಕೂಡ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಂಡಂತಾಗಿದೆ.
ಈ ಮೂಲಕ ಭಾರತ ಟಿ20 ಕ್ರಿಕೆಟ್ನಲ್ಲಿ 100ನೇ ಪಂದ್ಯ ಗೆದ್ದ ಸಾಧನೆ ಮಾಡಿತು. ರೋಹಿತ್ ಶರ್ಮಾ ನಾಯಕತ್ವದಲ್ಲಿ ತವರಿನಲ್ಲಿ ಆಡಿದ 17 ಪಂದ್ಯಗಳಲ್ಲಿ ಭಾರತ 16 ರಲ್ಲಿ ಗೆಲುವು ಸಾಧಿಸಿದೆ.
ಎರಡನೇ ಟಿ20 ಪಂದ್ಯ ಗೆಲ್ಲುವ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ತವರಿನಲ್ಲಿ ಕೊಹ್ಲಿ ಹಾಗೂ ಧೋನಿಗಿಂತ ಅಧಿಕ ಪಂದ್ಯಗಳನ್ನು ಗೆಲ್ಲುವ ಮೂಲಕ ರೋಹಿತ್ ಶರ್ಮಾ ಸಾಧನೆ ಮಾಡಿದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ 11ನೇ ಬಾರಿ ಸರಣಿ ಗೆದ್ದ ಸಾಧನೆ ಮಾಡಿದೆ.