Wednesday, March 29, 2023

Latest Posts

ರೋಹಿತ್ ಅರ್ಧಶತಕ: ಮೊದಲ ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾ 77 ರನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 177 ರನ್‌ಗಳಿಗೆ ಆಲೌಟ್ ಮಾಡಿದ್ದ ಟೀಂ ಇಂಡಿಯಾ, ಉತ್ತಮ ಆರಂಭ ಪಡೆದಿದ್ದು, ಮೊದಲ ದಿನದಾಟದಂತ್ಯದ ವೇಳೆಗೆ ಟೀಂ ಇಂಡಿಯಾ ಒಂದು ವಿಕೆಟ್ ನಷ್ಟಕ್ಕೆ 77 ರನ್‌ ಬಾರಿಸಿದ್ದು, ಇನ್ನು ಕೇವಲ 100 ರನ್‌ಗಳ ಹಿನ್ನಡೆಯಲ್ಲಿದೆ.

ಕೆ. ಎಲ್ ರಾಹುಲ್ ಎಚ್ಚರಿಕೆಯ ಬ್ಯಾಟಿಂಗ್‌ ನಡೆಸಿದರೆ, ನಾಯಕ ರೋಹಿತ್ ಶರ್ಮಾ, ಚುರುಕಿನ ಬ್ಯಾಟಿಂಗ್ ಮೂಲಕ ಮಿಂಚಿದರು.

ಮೊದಲ ವಿಕೆಟ್‌ಗೆ ಈ ಜೋಡಿ 138 ಎಸೆತಗಳನ್ನು ಎದುರಿಸಿ 76 ರನ್‌ಗಳ ಜತೆಯಾಟವಾಡಿತು. ಕೆ ಎಲ್ ರಾಹುಲ್‌ 71 ಎಸೆತಗಳನ್ನು ಎದುರಿಸಿ ಮೊದಲ ದಿನದಾಟ ಮುಕ್ತಾಯಕ್ಕೆ 8 ಎಸೆತಗಳು ಬಾಕಿ ಇದ್ದಾಗ ಟೊಡ್ ಮೊರ್ಫಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ರೋಹಿತ್ ಶರ್ಮಾ, ಮತ್ತೊಂದು ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಮಿಂಚಿದರು. ರೋಹಿತ್ ಶರ್ಮಾ 66 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಸದ್ಯ ರೋಹಿತ್ ಶರ್ಮಾ 69 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 56 ರನ್ ಬಾರಿಸಿ ಎರಡನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ. ಮತ್ತೊಂದೆಡೆ ರವಿಚಂದ್ರನ್ ಅಶ್ವಿನ್‌ 5 ಎಸೆತಗಳನ್ನು ಎದುರಿಸಿದ್ದು, ಎರಡನೇ ದಿನ ಖಾತೆ ತೆರೆಯುವ ವಿಶ್ವಾಸದಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!