ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ವಿಟರ್‌ನಲ್ಲಿ ಬ್ಲೂ ಟಿಕ್ ಬದಲಾಗಿ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಗೆ ಪ್ರತ್ಯೇಕ ಬಣ್ಣದ ದೃಢೀಕರಣವನ್ನು ಮುಂದಿನ ವಾರದಿಂದ ಜಾರಿಗೆ ತರುವುದಾಗಿ ಟ್ವಿಟರ್ ಒಡೆಯ ಎಲಾನ್ ಮಸ್ಕ್ ತಿಳಿಸಿದ್ದಾರೆ.
ಹೊಸ ಬ್ಲೂ ಟಿಕ್ ಯೋಜನೆಗೆ ಈಗ ಸದ್ಯಕ್ಕೆ ತಡೆಹಿಡಿಯಲಾಗಿದೆ.
ಸರ್ಕಾರ, ಸಂಘಟನೆಗಳು ಮತ್ತು ವ್ಯಕ್ತಿಗಳಿಗೆ ಬೇರೆ ಬೇರೆ ಬಣ್ಣ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ. ಕಂಪನಿಗಳಿಗೆ ಚಿನ್ನದ ಟಿಕ್, ಸರ್ಕಾರಿ ಅಧಿಕಾರಿಗಳಿಗೆ ಕಂದು, ಸಾಮಾನ್ಯರಿಗೆ ನೀಲಿ ಬಣ್ಣದ ನೀಡುವುದಾಗಿ ಎಂದು ಮಸ್ಕ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.