ಕೊಡಚಾದ್ರಿ ಬೆಟ್ಟ ಸಹಿತ ದೇಶದ 18 ಕಡೆಗಳಲ್ಲಿ ರೋಪ್‌ವೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉಡುಪಿಯ ಕೊಡಚಾದ್ರಿ ಬೆಟ್ಟ ಸೇರಿದಂತೆ ದೇಶಾದ್ಯಂತ ಸುಮಾರು 18 ಕಡೆಗಳಲ್ಲಿ ರೋಪ್‌ವೇ ಯೋಜನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೊಡಚಾದ್ರಿ ಬೆಟ್ಟಕ್ಕೆ ಸುಮಾರು 7 ಕಿ.ಮೀ ಉದ್ದದ ರೋಪ್‌ವೇಯನ್ನು ನಿರ್ಮಿಸಲು ಕೇಂದ್ರ ಯೋಜಿಸಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಾದ ತ್ರಿಪುರಾ, ಅರುಣಾಚಲ ಪ್ರದೇಶ, ಮಣಿಪುರ, ತಮಿಳುನಾಡು, ಆಂಧ್ರಪ್ರದೇಶ, ತಮಿಳುನಾಡು, ಲೇಹ್, ಸೇರಿದಂತೆ ಒಟ್ಟು 18 ಕಡೆಗಳಲ್ಲಿ ರೋಪ್‌ವೇ ನಿರ್ಮಾಣದ ಯೋಜನೆ ಒಳಗೊಂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬೆಟ್ಟದ ಮೇಲಿರುವ ಪ್ರಾಚೀನ ಶಂಕರಾಚಾರ್ಯ ದೇವಾಲಯಕ್ಕೆ 1 ಕಿ.ಮೀ ಉದ್ದದ ರೋಪ್‌ವೇ, ಜಮ್ಮು ಪ್ರದೇಶದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಬಳಿ ಶಿವಖೋರಿ ದೇವಸ್ಥಾನದವರೆಗೆ 2 ಕಿ.ಮೀ, ಪುಣೆಯ ರಾಜ್‌ಗಡ್ ಕೋಟೆಗೆ 1.4 ಕಿ.ಮೀ, ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನಕ್ಕೆ 2.3 ಕಿ.ಮೀ, ತೆಲಂಗಾಣದ ಈಗಳಪೆಂಟಾದಿಂದ ಕೃಷ್ಣಾ ನದಿಗೆ ಅಡ್ಡಲಾಗಿ, ಉತ್ತರ ಪ್ರದೇಶದ ಗಾಜಿಯಾಬಾದ್‌ನ ವೈಶಾಲಿ ಮೆಟ್ರೋ ನಿಲ್ದಾಣದಿಂದ ಮೋಹನ್ ನಗರ ಮೆಟ್ರೋ ನಿಲ್ದಾಣದವರೆಗೆ 10 ಕಿ.ಮೀ ಉದ್ದದ ರೋಪ್‌ವೇ ನಿರ್ಮಾಣದ ಬಗ್ಗೆಯೂ ಕೇಂದ್ರ ಮುಂದಾಗಿದೆ.

ರೋಪ್‌ವೇಗಳು ಸಾಮಾನ್ಯವಾಗಿ ಪರ್ವತ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಆಕರ್ಷಕ ಸಾರಿಗೆ ವಿಧಾನವಾಗಿದೆ. ಕೇದಾರನಾಥ ದೇವಸ್ಥಾನಕ್ಕೆ ಮತ್ತು ಉತ್ತರಾಖಂಡದ ಹೇಮಕುಂಡ್ ಸಾಹಿಬ್‌ಗೆ ಈ ವರ್ಷಾಂತ್ಯದೊಳಗೆ ಅಂತಿಮಗೊಳ್ಳುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!