Wednesday, July 6, 2022

Latest Posts

ರೋಪ್​ವೇ ದುರಂತ: ಹೆಲಿಕಾಪ್ಟರ್ ಮೂಲಕ ರಕ್ಷಿಸುವ ವೇಳೆ ಜಾರಿ ಬಿದ್ದು ವ್ಯಕ್ತಿ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾರ್ಖಂಡ್ ಜಿಲ್ಲೆಯ ತ್ರಿಕೂಟ್​ ಬೆಟ್ಟದಲ್ಲಿ ಕೇಬಲ್ ಕಾರ್​ ಡಿಕ್ಕಿ ಹೊಡೆದಿದ್ದರಿಂದ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ರಕ್ಷಿಸಲ್ಪಟ್ಟಾಗ ಒಬ್ಬ ವ್ಯಕ್ತಿ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ.
ಭಾರತೀಯ ವಾಯುಪಡೆ ಹೆಲಿಕಾಪ್ಟರ್​ಗಳ ಸಹಾಯದಿಂದ ಕೆಲವರ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಈ ವೇಳೆ ಹೆಲಿಕಾಪ್ಟರ್​ನಿಂದ ಕೆಳಗೆ ಬಿದ್ದಿರುವ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.
ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ತ್ರಿಕುಟ್ ಬೆಟ್ಟಗಳಲ್ಲಿ ಭಾನುವಾರ ಕೇಬಲ್-ಕಾರು ಡಿಕ್ಕಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಲಿಸನ್ʼಗೆ ನಿಖರವಾದ ಕಾರಣ ಇನ್ನೂ ನಿರ್ಧರಿಸಲಾಗಿಲ್ಲ. ಆದಾಗ್ಯೂ, ಈ ಘಟನೆಯು ತಾಂತ್ರಿಕ ದೋಷದಿಂದ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಪಡೆಯು 50 ಜನರಲ್ಲಿ 30 ಮಂದಿಯನ್ನು ರಕ್ಷಿಸಲಾಗಿದ್ದು, 18 ಮಂದಿ ಉಳಿದಿದ್ದಾರೆ. ಸೂರ್ಯಾಸ್ತದ ನಂತ್ರ ರಕ್ಷಣಾ ಕಾರ್ಯಾಚರಣೆಯನ್ನ ನಿಲ್ಲಿಸಲಾಗಿದೆ. ನಾಳೆ ಮತ್ತೆ ಪ್ರಾರಂಭಿಸಲಾಗುವುದು.
ಜಾರ್ಖಂಡ್ ಪ್ರವಾಸೋದ್ಯಮ ಇಲಾಖೆ ಮಾಹಿತಿ ಪ್ರಕಾರ, ತ್ರಿಕೂಟ ರೋಪ್‌ವೇ ಬಾಬಾ ವೈದ್ಯನಾಥ ದೇಗುಲದಿಂದ ಸುಮಾರು 20 ಕಿ.ಮೀ. ದೂರದಲ್ಲಿದ್ದು, 766 ಮೀಟರ್ ಉದ್ದವಿದೆ. ಪರ್ವತವು 392 ಮೀಟರ್ ಎತ್ತರವಿದೆ ಎಂದು ಮಾಹಿತಿ ನೀಡಿದೆ.
ಘಟನೆಯ ನಂತ್ರ ರೋಪ್ ವೇ ಮ್ಯಾನೇಜರ್ ಮತ್ತು ಇತರ ಉದ್ಯೋಗಿಗಳು, ಖಾಸಗಿ ಕಂಪನಿಯ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಿಗಿದಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss