October 17, 2026
Saturday, October 17, 2026
spot_img

ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಎದುರಾದ ಸಂಕಷ್ಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಲುಕಿಗೊಂಡಿರುವ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಭೈರತಿ ಬಸವರಾಜ್ ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಸಿಐಡಿ ಪೊಲೀಸರು ಜಾಮೀನು ರದ್ದುಗೊಳಿಸಲು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

ಕಳೆದ ವರ್ಷ ಜುಲೈ 15ರಂದು ಕಿತ್ತಗನೂರಿನ ಜಮೀನು ವಿಚಾರವಾಗಿ ದುಷ್ಕರ್ಮಿಗಳ ಗುಂಪೊಂದು ಮಾಜಿ ರೌಡಿ ಶೀಟರ್ ಬಿಕ್ಲು ಶಿವನನ್ನು ಕೊಲೆ ಮಾಡಿದ್ದರು. ಮೃತನ ತಾಯಿ ಭೈರತಿ ಬಸವರಾಜ್ ಸೇರಿದಂತೆ ಹಲವರ ಮೇಲೆ ದೂರು ನೀಡಿದ್ದರು.

Must Read