ಹೊಸ ದಿಗಂತ ಡಿಜಿಟಿಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ರೌಡಿಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ್ನು ಕಿರಣ್, ವಿಮಲ್, ಪ್ರದೀಪ್, ಮದನ್, ಸ್ಯಾಮ್ಯುಯೆಲ್ ಪ್ಯಾಟ್ರಿಕ್ ಎಂಬುದಾಗಿ ಗುರುತಿಸಲಾಗಿದೆ.
ನಿನ್ನೆ ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದರು.
ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.