June 8, 2026
Monday, June 8, 2026
spot_img

SHOCKING | ಚನ್ನಪಟ್ಟಣದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ಹಾಸನ :

ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮಂಜೇಶ್ (43) ಕೊಲೆಯಾದ ರೌಡಿಶೀಟರ್. ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಮಂಜೇಶ್ ತಾಯಿ ಹಾಸನ ಮೂಲದವರು. ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದ. ಹಾಸನಕ್ಕೆ ಬಂದಿದ್ದ ವೇಳೆ ದಾಳಿ ಮಾಡಿರುವ ಹಂತಕರು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !