ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.
ವಿನಯ್ ಅಲಿಯಾಸ್ ಕುಂಟ ವಿನು (32) ಕೊಲೆಯಾದ ರೌಡಿಶೀಟರ್. ಈತ ಬೈಕ್ ನಲ್ಲಿ ತನ್ನ ಫಾರ್ಮ್ಹೌಸ್ಗೆ ಹೋಗುವ ವೇಳೆ ಓಮಿನಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆದಿದ್ದಾರೆ. ನಂತರ ಕೆಳಗೆ ಬಿದ್ದ ವಿನಯ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಈ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.