Sunday, December 3, 2023

Latest Posts

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಲ್ಲಿ ತಡರಾತ್ರಿ ನಡೆದಿದೆ.

ಬೆಂಗಳೂರಿನ ಕೋಣಕುಂಟೆ ಠಾಣಾ ವ್ಯಾಪ್ತಿಯಲ್ಲಿ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ರೌಡಿಶೀಟರ್ ನನ್ನು ಸಹದೇವ್ ಎಂದು ಗುರುತಿಸಲಾಗಿದೆ.

ರಾತ್ರಿ 9:30ರ ಸುಮಾರಿಗೆ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್‌ ಸಹದೇವ್‌ನನ್ನು ಮೂರು ಬೈಕ್‌ನಲ್ಲಿ ಬಂದಿದ್ದ ಆರು ಮಂದಿ ಹಂತಕರು ಸುತ್ತುವರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!