ಹೊಸದಿಗಂತ ಡಿಜಿಟಲ್ ಡೆಸ್ಕ್:
ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.
ಹತ್ಯೆಯಾದ ರೌಡಿಶೀಟರ್ ನನ್ನು ಮುಜೀಬ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ತೀವ್ರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಂದು ಬೆಳಗ್ಗೆ ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.