SHOCKING | ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಭೀಕರ ಹತ್ಯೆ

ಹೊಸದಿಗಂತ ವರದಿ ಕಲಬುರಗಿ:

ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ರೌಡಿಶೀಟರ್,ನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಆಳಂದ ತಾಲೂಕಿನ ಸಾವಳೇಶ್ವರ ಕ್ರಾಸ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.

ರೌಡಿಶೀಟರ್ ಸುಧಾಕರ್ (32) ಕೊಲೆಯಾಗಿದ್ದು, ಮಂಗಳವಾರ ತಡರಾತ್ರಿ ತನ್ನ ಸಹೋದರನ ಜೊತೆಗೆ ಬೈಕ್ ಮೇಲೆ ತೆರಳುವಾಗ ಈ ಘಟನೆ ನಡೆದಿದ್ದು, ಸುಧಾಕರ್ ಸಹೋದರನಿಗೂ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು,ಆಳಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!