spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಯ್ ಡಿಸೋಜಾ ಸಾವಿನ ಪ್ರಕರಣ: ಐವರು ಪೊಲೀಸ್ ಸಿಬ್ಬಂದಿಗಳಿಗೆ ನಿರೀಕ್ಷಣಾ ಜಾಮೀನು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ವರದಿ, ವೀರಾಜಪೇಟೆ:

ಪೊಲೀಸರ ಹಲ್ಲೆಯಿಂದ ಮೃತಪಟ್ಟಿದ್ದಾರೆಂದು ಆರೋಪಿಸಲಾದ ಪಟ್ಟಣದ ಚಿಕ್ಕಪೇಟೆಯ ರಾಯ್ ಡಿಸೋಜಾ (50) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಎರಡನೇ ಅಧಿಕ ಸೆಷನ್ಸ್ ನ್ಯಾಯಾಲಯ ಐದು ಮಂದಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಜೂ.9 ರಂದು 8 ಮಂದಿ ಪೊಲೀಸ್ ಸಿಬ್ಬಂದಿಗಳು ನಗರ ಪೊಲೀಸ್ ಠಾಣೆಯ ಆವರಣದಲ್ಲಿ ರಾಯ್ ಡಿಸೋಜಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣನಾಗಿದ್ದಾರೆ ಎಂದು ಆರೋಪಿಸಿ ಸಿ.ಐ.ಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದರು.
ವೀರಾಜಪೇಟೆ ಪೊಲೀಸ್ ಸಿಬ್ಬಂದಿಗಳಾದ ಎನ್.ಎಸ್.ಲೊಕೇಶ್, ಎಚ್.ಜಿ.ತನುಕುಮಾರ್, ಎಂ.ಯು.ಸುನಿಲ್, ಎನ್.ಎಚ್.ಸತೀಶ್ ಹಾಗೂ ಸಂಗಮೇಶ್ ಅವರು ಇಲ್ಲಿನ ಎರಡನೇ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಐದು ಮಂದಿಯ ಪರ ಬಿ.ರತ್ನಾಕರ ಶೆಟ್ಟಿ ವಕಾಲತ್ತು ವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಉಳಿದ 3 ಮಂದಿ ಪೊಲೀಸ್ ಸಿಬ್ಬಂದಿಗಳು ಜಾಮೀನು ಅರ್ಜಿ ಸಲ್ಲಿಸಿರಲಿಲ್ಲವೆಂದು ಹೇಳಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss