ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ 65ನೇ ಪಂದ್ಯದಲ್ಲಿ ಸನ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು 42 ರನ್ಗಳಿಂದ ಮಣಿಸಿದ ಹೈದರಾಬಾದ್ ಲೀಗ್ನಲ್ಲಿ 5ನೇ ಗೆಲುವು ದಾಖಲಿಸಿತು.
ಈ ಗೆಲುವು ಹೈದರಾಬಾದ್ಗೆ ಯಾವುದೇ ವ್ಯತ್ಯಾಸವನ್ನುಂಟು ಮಾಡದಿದ್ದರೂ ಆರ್ಸಿಬಿಗೆ ದೊಡ್ಡ ಆಘಾತ ನೀಡಿದೆ. ಈ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿರುವ ಆರ್ಸಿಬಿ ಪ್ಲೇಆಫ್ನಲ್ಲಿ ಮೊದಲ ಎರಡನೇ ಸ್ಥಾನವನ್ನು ಪಡೆಯುವುದು ಕಷ್ಟಕರವಾಗಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿಗೆ ಮಧ್ಯಮ ಕ್ರಮಾಂಕದ ವೈಫಲ್ಯ ಸೋಲಿನ ರುಚಿ ನೋಡುವಂತೆ ಮಾಡಿದೆ.