ಎಬಿ ಡಿವಿಲಿಯರ್ಸ್ RCBಗೆ ಮರಳುವುದು ಪಕ್ಕಾ..! ದೃಢಪಡಿಸಿದ ಪ್ರಾಂಚೈಸಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬ್ಯಾಟಿಂಗ್‌ನ ಮಾಂತ್ರಿಕ, ಮಿಸ್ಟರ್ 360 ಡಿಗ್ರಿ ಎಬಿ ಡಿವಿಲಿಯರ್ಸ್‌ ಐಪಿಎಲ್ 2023 ರಲ್ಲಿ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು‌ ತಂಡವನ್ನು ಸೇರಿಕೊಳ್ಳಲಿದ್ದಾರೆ. ಆರ್ಸಿಬಿ ಫ್ರಾಂಚೈಸಿಯು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಈ ವಿಚಾರವನ್ನು ಖಚಿತಪಡಿಸಿದೆ.
ನಿಖರವಾಗಿ ಒಂದು ವರ್ಷದ ಹಿಂದೆ ನವೆಂಬರ್ 19, 2021 ರಂದು ಎಬಿಡಿ ತಮ್ಮ ನಿವೃತ್ತಿಯನ್ನು ಘೋಷಿಸಿದ್ದರು. ಆದರೆ ಎಬಿ ಡಿವಿಲಿಯರ್ಸ್ ಅವರು ಈ ಬಾರಿ ಆಟಗಾರನಾಗಿ ಅಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದ ಅತ್ಯಂತ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಡಿವಿಲಿಯರ್ಸ್ ಒಬ್ಬರು. ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಒಟ್ಟಾರೆಯಾಗಿ ಆರನೇ ಅತಿ ಹೆಚ್ಚು ರನ್ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ 170 ಇನ್ನಿಂಗ್ಸ್‌ಗಳಲ್ಲಿ 3 ಶತಕ ಮತ್ತು 40 ಅರ್ಧ ಶತಕ ಸೇರಿದಂತೆ 5,162 ರನ್ ಕಲೆಹಾಕಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!