ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಭಿಮಾನಿಗಳಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರಾಟ ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಮಾಲೀಕ ಸಂಸ್ಥೆ ಯುನೈಟೆಡ್ ಸ್ಪಿರಿಟ್ಸ್, ಡಿಯಾಜಿಯೊ ಆರ್‌ಸಿಬಿಯನ್ನು ಮಾರಾಟ ಮಾಡುತ್ತಿಲ್ಲ ಎಂದು ಹೇಳಿದೆ.
ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಸಂಭಾವ್ಯ ಪಾಲು ಮಾರಾಟಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಕೇವಲ ಊಹಾತ್ಮಕ ಸ್ವರೂಪದ್ದಾಗಿವೆ. ಅಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಂಸ್ಥೆ ಸ್ಪಷ್ಟನೆ ನೀಡಿದೆ.