ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ವಿಚಾರ, ತಪ್ಪು ಮಾಡಿದರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಮೇಶ್ ರೆಡ್ಡಿ ಹಾಗೂ ಭಯೋತ್ಪಾದಕರಿಗೆ ಮೊಬೈಲ್ ನೀಡಲಾಗಿದ್ದು, ಅಲ್ಲದೆ ಇಂದು ಸಹ ಮತ್ತೊಂದು ವಿಡಿಯೋ ವೈರಲಾಗಿದ್ದು ಕೈದಿಗಳು ಮಧ್ಯ ಸೇವಿಸಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಅಲ್ಲದೇ ಅವಕಾಶ ಮಾಡಿಕೊಟ್ಟವರೆ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

