ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ: ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ನೊಟೀಸ್ನೀಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಈ ನೊಟೀಸ್ ನೀಡಲಾಗಿದೆ. ಜೈಲಿನಲ್ಲಿ ನಡೆದ ಅಕ್ರಮದ ಬಗ್ಗೆ ವಿವರಣೆ ನೀಡುವಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿಗೆ ನೊಟೀಸ್ ನೀಡಿರುವುದು ತಿಳಿದುಬಂದಿದೆ.

ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ನೊಟೀಸ್ ​ನಲ್ಲಿ ಹಲವು ಪ್ರಶ್ನೆಗಳಿಗೆ ಉತ್ತರ ನೀಡುವಂತೆ ತಿಳಿಸಲಾಗಿದೆ.

ಜೈಲಿನ ಅಕ್ರಮ ತಡೆಗಟ್ಟುವ ವಿಚಾರದಲ್ಲಿ ನೀವು ಕೈಗೊಂಡ ಕ್ರಮಗಳೇನು? ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ನಿಮ್ಮ ಗಮನಕ್ಕೆ ಬಂದಿರಲಿಲ್ವಾ? ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು? ಮುಂತಾದ ಪ್ರಶ್ನೆಗಳಿಗೆ ವಿವರವಾದ ಉತ್ತರ ನೀಡುವಂತೆ ಮಾಲಿನಿ ಕೃಷ್ಣಮೂರ್ತಿಗೆ ತಾಕೀತು ಮಾಡಲಾಗಿದೆ. ಮಾಲಿನಿ ಕೃಷ್ಣಮೂರ್ತಿ ನೀಡುವ ಉತ್ತರವನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!