ಇಂದು ಬೃಹತ್‌ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಮೋದಿ: 10 ಲಕ್ಷ ಮಂದಿಗೆ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದು, 10 ಲಕ್ಷ ಸಿಬ್ಬಂದಿಗೆ ಉದ್ಯೋಗ ಸಿಗಲಿದೆ.
ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಬದ್ಧತೆಯ ಉದ್ದೇಶದಿಂದ ಪ್ರಧಾನಮಂತ್ರಿಯವರು ‘ರೋಜ್ಗಾರ್ ಮೇಳ’ವನ್ನು ಪ್ರಾರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಹೊಸದಾಗಿ ಉದ್ಯೋಗ ಪಡೆದ 75,000 ಮಂದಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ಹೇಳಿಕೆ ತಿಳಿಸಿದೆ.
ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಸುಮಾರು 20,000 ಜನರಿಗೆ ವಿವಿಧ ಕೇಂದ್ರ ಸಚಿವರು ನೇಮಕಾತಿ ಪತ್ರಗಳನ್ನು ನೀಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಜೈಪುರದಲ್ಲಿ ಉದ್ಯೋಗಗಳನ್ನು ಹಂಚಿಕೆ ಮಾಡಿಲಿದ್ದು, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಭೋಪಾಲ್‌ ನಲ್ಲಿ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಚಂಡೀಗಢದಿಂದ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ.
‘ರೋಜ್‌ಗಾರ್ ಮೇಳ’ದ ಅಡಿಯಲ್ಲಿ ತಮ್ಮ ಗೊತ್ತುಪಡಿಸಿದ ಸ್ಥಳಗಳಲ್ಲಿ ವಿವಿಧ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದ ಕೆಲವು ಅಭ್ಯರ್ಥಿಗಳಿಗೆ ಪತ್ರಗಳನ್ನು ವೈಯಕ್ತಿಕವಾಗಿ ನೀಡಲಾಗುತ್ತದೆ. ಸ್ಥಳದಲ್ಲಿ ಭಾಗವಹಿಸುವವರನ್ನು ಹೊರತುಪಡಿಸಿ ನೇಮಕಗೊಂಡವರಿಗೆ ನೇಮಕಾತಿ ಪತ್ರಗಳನ್ನು ಇಮೇಲ್ ಅಥವಾ ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!