ರೋಝ್‌ಗಾರ್ ಮೇಳ: 71 ಸಾವಿರ ನೇಮಕಾತಿ ಪತ್ರ ವಿತರಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೋಝ್‌ಗಾರ್ ಮೇಳದ ಅಡಿಯಲ್ಲಿ ಹೊಸತಾಗಿ ಸೇರ್ಪಡೆಯಾಗಿರುವವರಿಗೆ 71 ಸಾವಿರ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿತರಿಸಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಗೊಂಡಿರುವವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ರೋಝ್‌ಗಾರ್ ಮೇಳ ಉದ್ಯೋಗ ಸೃಷ್ಟಿ ಉತ್ತೇಜಿಸುವ ಉಪಕ್ರಮದ ಒಂದು ಭಾಗವಾಗಿದೆ. ಯುವಜನತೆ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ನೇರವಾಗಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಅಕ್ಟೋಬರ್‌ನಲ್ಲಿ ರೋಝ್‌ಗಾರ್ ಮೇಳದ ಅಡಿಯಲ್ಲಿ 75 ಸಾವಿರ ಮಂದಿ ಹೊಸತಾಗಿ ಸೇರಿಕೊಂಡಿದ್ದು, ನೇಮಕಾತಿ ಪತ್ರಗಳನ್ನು ವಿತರಿಸಲಾಗಿತ್ತು. ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಸಚಿವಾಲಯಗಳು ಸ್ವತಃ ಅಥವಾ ಯೂನಿಯನ್ ಪಬ್ಲಿಕ್ ಅರ್ವಿಸಸ್ ಕಮಿಷನ್, ಸ್ಟಾಫ್ ಕಲೆಕ್ಷನ್ ಕಮಿಷನ್ ಮತ್ತು ರೈಲ್ವೆ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಿಷನ್ ಮೋಡ್‌ನಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!