Friday, June 9, 2023

Latest Posts

ದಿಬ್ರುಗಢದಲ್ಲಿ ಚಲಿಸುವ ರೈಲು ಡಿಕ್ಕಿ ಹೊಡೆದು ಆರ್‌ಪಿಎಫ್ ಯೋಧ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಯೋಧ ಮೃತಪಟ್ಟಿರುವ ಘಟನೆ ದಿಬ್ರುಗಢ್ ಟೌನ್ ರೈಲು ನಿಲ್ದಾಣದಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಆರ್‌ಪಿಎಫ್ ಜವಾನನನ್ನು ಹವಾಲ್ದಾರ್ ಧನ್‌ಕುಮಾರ್ ಹಜಾಂಗ್ ಎಂದು ಗುರುತಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 08.45ರ ಸುಮಾರಿಗೆ ಈ ಘಟನೆ ನಡೆದಿದೆ. ಮೇಲ್ನೋಟಕ್ಕೆ ಇದು ಅಪಘಾತದ ಪ್ರಕರಣ ಎಂದು ತೋರುತ್ತದೆ. ಆದರೆ ತನಿಖೆಯ ನಂತರವಷ್ಟೇ ವಿಷಯ ತಿಳಿಯಲಿದೆ.

“ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಸ್ಸಾಂ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಮತ್ತು ನಾವು ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ” ಎಂದು ಜಿಆರ್‌ಪಿ ಸಬ್ ಇನ್ಸ್‌ಪೆಕ್ಟರ್ ಮೃಣಾಲ್ ದೇಕಾ ತಿಳಿಸಿದ್ದಾರೆ.

ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!