ELECTION RESULT: ಆರ್‌ಆರ್ ನಗರ ಚುನಾವಣಾ ಫಲಿತಾಂಶ: ಮುನಿರತ್ನಗೆ ಗೆಲುವು

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಹೈವೋಲ್ಟೇಜ್ ಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ & ಕುಸುಮಾ ಮಧ್ಯೆ ಜಿದ್ದಾಜಿದ್ದಿನ ಫೈಟ್ ಏರ್ಪಟ್ಟಿತ್ತು. ಈಗ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ಮುನಿರತ್ನ ಅಂತಿಮವಾಗಿ ಗೆಲುವು ಸಾಧಿಸಿದ್ದಾರೆ.

2013ರಿಂದಲೂ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಆಯ್ಕೆಯಾಗಿ ಬರುತ್ತಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಈ ಹಿಂದೆ ಕಾಂಗ್ರೆಸ್‌ನಿಂದ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದರು. 2013 & 2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 2 ಬಾರಿ ಗೆಲುವು ಸಾಧಿಸಿದ್ರು. ಬದಲಾದ ಕಾಲಘಟ್ಟದಲ್ಲಿ 2020ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 1,25,990 ಮತ ಪಡೆದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ವಿರುದ್ಧ ಭರ್ಜರಿ ಜಯ ಸಾಧಿಸಿದ್ದರು. ಇದೀಗ 2023ರಲ್ಲೂ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.

2ನೇ ಬಾರಿ ಕುಸುಮಾ VS ಮುನಿರತ್ನ ಫೈಟ್
2020ರ ಅಕ್ಟೋಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆರ್‌ಆರ್ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು ಸಚಿವ ಮುನಿರತ್ನ. ಅತ್ತ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಸ್ಪರ್ಧೆ ಮಾಡಿದ್ದರು. 2023ರಲ್ಲಿ ಮತ್ತೊಮ್ಮೆ ರಾಜರಾಜೇಶ್ವರಿ ನಗರ ಕ್ಷೇತ್ರ ರಾಜ್ಯದ ಗಮನ  ಸೆಳೆದಿತ್ತು. ಸತತ 3 ಬಾರಿ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಮುನಿರತ್ನ 2023ರಲ್ಲೂ ಗೆಲುವು ಸಾಧಿಸುತ್ತಾರಾ? ಎಂಬ ಪ್ರಶ್ನೆ ಕ್ಷೇತ್ರದ ಮತದಾರರ ಕುತೂಹಲ ಕೆರಳಿಸಿತ್ತು, ಆ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದ್ದು ಮುನಿರತ್ನ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!