ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ ಬರೆದ ‘ಆರ್​ಆರ್​ಆರ್​’ ಸಿನಿಮಾ: ಏಳೇ ದಿನದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಾಕ್ಸ್ ಆಫೀಸ್ನಲ್ಲಿ ಸಖತ್ ಸದ್ದು ಮಾಡುತ್ತಿರುವ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದ್ದು, ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಈ ಹಿಂದೆ 2015ರಲ್ಲಿ ರಿಲೀಸ್ ಆಗಿದ್ದ ರಾಜಮೌಳಿ ನಿರ್ದೇಶನದ ‘ಬಾಹುಬಲಿ 1’ ಒಟ್ಟು 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇದೀಗ ಆ ದಾಖಲೆಯನ್ನು ಏಳೇ ದಿನದಲ್ಲಿ ಪುಡಿಪುಡಿ ಮಾಡಿದೆ ‘ಆರ್​ಆರ್​ಆರ್​’ ಸಿನಿಮಾ ವಿಶ್ವಾದ್ಯಂತ ಸುಮಾರು 709 ಕೋಟಿ ರೂ ಬಾಚಿಕೊಂಡಿದೆ.
‘ಆರ್​ಆರ್​ಆರ್​’ನ ಪಾತ್ರಗಳು ತೆಲುಗು ಮೂಲದ್ದಾದರೂ,ಎಲ್ಲೆಡೆ ಜನರನ್ನು ಕನೆಕ್ಟ್ ಆಗಿದೆ. ಈ ಮೂಲಕ ‘ಆರ್​ಆರ್​ಆರ್​’ ಗಲ್ಲಾಪೆಟ್ಟಿಗೆಯಲ್ಲಿ ಮುನ್ನುಗ್ಗುತ್ತಿದೆ.
ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ‘ಆರ್​ಆರ್​ಆರ್​’ ಮಾರ್ಚ್ 25ರಂದು ತೆರೆಗೆ ಬಂದಿತ್ತು. ಮೊದಲ ದಿನವೇ ಬರೋಬ್ಬರಿ 257 ಕೋಟಿ ರೂಗಳನ್ನು ಚಿತ್ರ ಬಾಚಿಕೊಂಡಿತ್ತು. ಇದೀಗ ಚಿತ್ರ ರಿಲೀಸ್ ಆಗಿ ವಾರ ಕಳೆದಿದ್ದು, ಗುರುವಾರದಂದು 37 ಕೋಟಿ ರೂ ಗಳಿಸುವ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ ₹ 709.36 ಕೋಟಿ ರೂಗೆ ತಲುಪಿದೆ. ಎರಡು ಅಥವಾ ಮೂರನೇ ವಾರದಲ್ಲಿ ಚಿತ್ರವು 1000 ಕೋಟಿ ಕ್ಲಬ್​ ಸೇರಬಹುದು ಎಂಬ ನಿರೀಕ್ಷೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!