Thursday, July 7, 2022

Latest Posts

ಮತ್ತೊಮ್ಮೆ ‘RRR’ ಸಿನಿಮಾ ರಿಲೀಸ್‌ ಡೇಟ್ ಘೋಷಣೆ

ಹೊಸದಿಗಂತ ವರದಿ,ಮಂಗಳೂರು:

ಎನ್‌ಟಿಆರ್, ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟಿಸಿರುವ ಬಹು ನಿರೀಕ್ಷಿತ ಚಿತ್ರ ‘RRR’ ರಿಲೀಸ್‌ಗೆ ಕೊನೆಗೂ ಹೊಸ ಡೇಟ್‌ ಫಿಕ್ಸ್‌ ಆಗಿದೆ.
ಹಲವು ಬಾರಿ ಬಿಡುಗಡೆ ದಿನಾಂಕವನ್ನು ಮುಂದೂಡಿರುವ ಈ ಚಿತ್ರ ತಂಡ ಇದೀಗ ಹೊಸದಾಗಿ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ.
ಇದೀಗ ದೇಶದಲ್ಲಿ ಕೊರೋನಾ ಪರಿಸ್ಥಿತಿ ಸುಧಾರಿಸಿದರೆ ಮಾರ್ಚ್ 28 ಇಲ್ಲವೇ ಏಪ್ರಿಲ್ 28 ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಿದೆ.
ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ರಾಮ್ ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ ಹಾಗೂ ಜೂ.ಎನ್‌ಟಿಆರ್ ಕೋಮರಂ ಭೀಮನಾಗಿ ನಟಿಸಿದ್ದಾರೆ. ನಾಯಕಿಯರಾಗಿ ಆಲಿಯಾ ಭಟ್ ಮತ್ತು ಒಲಿವಿಯಾ ಮೋರಿಸ್ ನಟಿಸಿದ್ದಾರೆ.
ಈ ಮೊದಲು ಜನವರಿ 7ರಂದು ಆರ್‌ಆರ್‌ಆರ್‌ ಚಿತ್ರ ಬಿಡುಗಡೆ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ, ದೇಶದಲ್ಲಿ ಕೋವಿಡ್‌ ಹೆಚ್ಚಾಗಿದ್ದ ಕಾರಣ ಸಿನಿಮಾ ಬಿಡುಗಡೆಯ ದಿನಾಂಕವನ್ನು ಏಪ್ರಿಲ್‌ಗೆ ಮುಂಡೂಲಾಗಿತ್ತು.
ಇನ್ನು ಥಿಯೇಟರ್‌ಗಳಲ್ಲಿ ಶೇ.100ರಷ್ಟು ಭರ್ತಿಗೆ ಅವಕಾಶ ನೀಡಿದರೆ ಮಾರ್ಚ್‌ 28ಕ್ಕೆ ಬಿಡುಗಡೆ ಮಾಡುತ್ತೇವೆ. ಇಲ್ಲದಿದ್ರೆ ಏಪ್ರಿಲ್‌ 28ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss