ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಗಳಿಸಿದ್ದು, ಆರ್‌ಸಿಬಿ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿ ಹಲವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಗದಗ ಜಿಲ್ಲಾ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಟ್ಯಾಬ್ ನಲ್ಲೇ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದರು.
ಆರ್ ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Rrrrrrrrr…. Cccccccc…. Bbbbbbbbb….ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ.. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೂ ಕೂಡ ಆರ್‌ಸಿಬಿ ತಂಡಕ್ಕೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. 18 ವರ್ಷಗಳ ಕನಸು ನನಸು ಮಾಡಿದ ಆರ್”ಸಿಬಿ ತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳು. ಈ ಸಲ ಕಪ್ ನಮ್ದೇ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.