ಭ್ರೂಣಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ: ಆರೋಗ್ಯ ಇಲಾಖೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಭ್ರೂಣಹತ್ಯೆ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ನೀಡಲು ಆರೋಗ್ಯ ಇಲಾಖೆ ತಯಾರಿ ನಡೆಸಿದೆ.

ಭ್ರೂಣಹತ್ಯೆ ಬಗ್ಗೆ ಸುಳಿವು ಸಿಕ್ಕಂತೆ ಮಾಹಿತಿ ನೀಡಿದರೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಭ್ರೂಣಹತ್ಯೆ ಬುಡಸಮೇತ ಕಿತ್ತುಹಾಕಲು ಆರೋಗ್ಯ ಇಲಾಖೆ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡುತ್ತಿದೆ. ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಬಗ್ಗೆ ಸುಳಿವು ಸಿಕ್ಕಾಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಂತರ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಈ ಕ್ರಮದಿಂದ ಭ್ರೂಣಹತ್ಯೆ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆಯಾ ಎಂದು ಆರೋಗ್ಯ ಇಲಾಖೆ ಪರಿಶೀಲನೆ ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!