Monday, March 27, 2023

Latest Posts

ಟಿಕೆಟ್ ರಹಿತ ಪ್ರಯಾಣಿಕರಿಂದ 100 ಕೋಟಿ ರೂ. ದಂಡ ವಸೂಲಿ ಮಾಡಿದ ರೈಲ್ವೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈ ರೈಲ್ವೇ ಅಧಿಕಾರಿಗಳು ಟಿಕೆಟ್ ಇಲ್ಲದೆ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಭಾರಿ ದಂಡ ವಿಧಿಸಿದ್ದಾರೆ. ಮುಂಬೈ ಡಿವಿಷನ್ ಸೆಂಟ್ರಲ್ ರೈಲ್ವೇ ಟಿಕೆಟ್ ರಹಿತ ರೈಲ್ವೇ ಪ್ರಯಾಣಿಕರಿಂದ ರೂ.100 ಕೋಟಿ ದಂಡವನ್ನು ಸಂಗ್ರಹಿಸಿದೆ ಎಂದು ಬಹಿರಂಗಪಡಿಸಿದೆ. ಕಳೆದ ವರ್ಷ ಏಪ್ರಿಲ್‌ನಿಂದ ಈ ವರ್ಷದ ಫೆಬ್ರವರಿ ಅಂತ್ಯದವರೆಗೆ ಈ ಮೊತ್ತದ ದಂಡವನ್ನು ಸಂಗ್ರಹಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಇಷ್ಟು ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ದಂಡ ವಸೂಲಿ ಮಾಡಿದ ವಿಭಾಗ ಎಂಬ ಹೆಗ್ಗಳಿಕೆಗೆ ಮುಂಬೈ ಪಾತ್ರವಾಗಿದೆ. ಕಳೆದ ವರ್ಷ 60 ಕೋಟಿ ರೂ.ಗಳ ದಂಡ, ಈ ಬಾರಿ ಹೆಚ್ಚುವರಿಯಾಗಿ 40 ಕೋಟಿ ರೂ. ಸಂಗ್ರಹವಾಗಿದೆ. 18 ಲಕ್ಷ ಟಿಕೆಟ್ ರಹಿತ ಪ್ರಯಾಣಿಕರಿಂದ ಈ ಮೊತ್ತ ಸಂಗ್ರಹಿಸಲಾಗಿದೆ. ಮುಂಬೈ ವಿಭಾಗದ ಅಡಿಯಲ್ಲಿ ಉಪನಗರ ರೈಲುಗಳನ್ನು ಹೊರತುಪಡಿಸಿ, ಎಕ್ಸ್‌ಪ್ರೆಸ್ ರೈಲುಗಳು ಮತ್ತು ಸಾಮಾನ್ಯ ರೈಲುಗಳಿಂದ ಈ ಮೊತ್ತವನ್ನು ಸಂಗ್ರಹಿಸಲಾಗಿದೆ. ಟಿಕೆಟ್ ಇಲ್ಲದೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದ್ದರೂ ಕೆಲವರು ನಿರ್ಲಕ್ಷ್ಯ ವಹಿಸಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಟಿಕೆಟ್ ಖರೀದಿಸದೆ ಪ್ರಯಾಣಿಸುವವರು ರೈಲುಗಳಲ್ಲಿ ಟಿಕೆಟ್ ಖರೀದಿಸಿದವರಿಗೆ ತೊಂದರೆ ನೀಡುತ್ತಿದ್ದು, ಅದಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂಬೈ ವಿಭಾಗದ ಅಡಿಯಲ್ಲಿ 77 ರೈಲು ನಿಲ್ದಾಣಗಳಿದ್ದು, 1,200 ಟಿಸಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!