September 24, 2026
Thursday, September 24, 2026
spot_img

ಜಮೀನು ಮ್ಯೂಟೇಷನ್‌ಗೆ 10 ಸಾವಿರ ರೂಪಾಯಿ ಲಂಚ: ಮಧ್ಯವರ್ತಿ ಲೋಕಾಯುಕ್ತ ಬಲೆಗೆ

ಹೊಸದಿಗಂತ ವರದಿ ಕಲಬುರಗಿ:

ಜಮೀನು ಮ್ಯೂಟೇಷನ್ ಮಾಡಿಕೊಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದ ಮಧ್ಯವರ್ತಿಯನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಕಂದಾಯ ಇಲಾಖೆ ಕಚೇರಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ವಿಲೇಜ್ ಅಕೌಂಟೆಂಟ್ ರಮೇಶ್ ಅವರ ಪರವಾಗಿ ಮಧ್ಯವರ್ತಿ ಸಾಗರ್ ಎಂಬಾತ ದೂರುದಾರ ಸತೀಶ್ ಅವರಿಂದ 10 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಜಮೀನು ಮ್ಯೂಟೇಷನ್ ಮಾಡಿಕೊಡಲು ವಿಲೇಜ್ ಅಕೌಂಟೆಂಟ್ ರಮೇಶ್ ಅವರು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅವರ ಪರವಾಗಿ ಕಚೇರಿಯಲ್ಲಿ ಸಾಗರ್ ಹಣ ಸ್ವೀಕರಿಸುತ್ತಿದ್ದ ಆರೋಪ ಕೇಳಿಬಂದಿದೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Must Read