ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿಕೊಂಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ದಿವಾಳಿ ಆಗಿರೋದನ್ನು ಪ್ರತಿ ಹೆಜ್ಜೆಯಲ್ಲೂ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲಾ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ವರ್ಗಾಯಿಸುತ್ತಿದ್ದಾರೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ಬಳಕೆ ಆಗಬೇಕಿದ್ದ 14,000 ಕೋಟಿ ರೂ. ಅನುದಾನ, ಗ್ಯಾರಂಟಿಗಳಿಗೆ ಹೋಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.