September 27, 2026
Sunday, September 27, 2026
spot_img

ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗ ನಗರದಲ್ಲಿ ಅನ್ಯಕೋಮಿನ ಅಪ್ರಾಪ್ತ ಯುವಕರು ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿ ಸಂಕೇತ್‌ನನ್ನು ಕೊಲೆ ಮಾಡಿದ್ದಾರೆ. ಇಬ್ಬರ ಜಗಳ ಬಿಡಿಸಲು ಹೋದ ಸಂಕೇತ್‌ ಹೆಣವಾಗಿದ್ದಾನೆ.

ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸರ್ಕಾರದ ಜತೆ ಶಿಕ್ಷಣ ಇಲಾಖೆಯಿಂದಲೂ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಡಿಸಿ ಪ್ರಭುಲಿಂಗ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈ ಬೆನ್ನಲ್ಲೇ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Must Read