ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂಬ ವಿಚಾರ ಸದನದಲ್ಲಿ ಸೋಮವಾರ ಪ್ರಸ್ತಾವ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್ ಅವರು, ಅಲ್ಪಸಂಖ್ಯಾಕರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಆರಂಭದಲ್ಲಿ ಯಾವ ರೀತಿ ಹೇಳಿಕೆ ನೀಡಿದ್ದರು ಎಂಬುದು ಕಣ್ಣೆದುರಿಗಿದೆ. ಆದರೀಗ ಮಾತು ತಿರುಚಿರುವುದು ಸ್ಪಷ್ಟವಾಗುತ್ತಿದೆ. ಬಿ.ವೈ. ವಿಜಯೇಂದ್ರ ನನಗೆ 150 ಕೋಟಿರೂ. ನೀಡಲು ಬಂದಿದ್ದರು ಎಂದು ಅನ್ವರ್ ಹೇಳಿರುವ ವೀಡಿಯೋಗಳಿವೆ. ಈಗ ಹೇಳಿಕೆ ಬದಲಾಯಿಸುತ್ತಿದ್ದಾರೆ. ಲಂಚದ ಆಮಿಷ ಅನ್ವರ್ ಮಾಣಿಪ್ಪಾಡಿ ಹೇಳಿದ್ದಕ್ಕೆ ಮಾತ್ರ ಗೊತ್ತಾಗಿದೆ. ಈಗ ಉಲ್ಟಾ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು. ಈ ವಿಷಯವಾಗಿ ಇಂದು ಚರ್ಚೆಗಳಾಗುವ ಸಾಧ್ಯತೆ ಇದ್ದು, ಏನೆಲ್ಲಾ ಮಾತುಕತೆ ನಡೆಯಲಿದೆ ಎಂದು ಕಾದುನೋಡಬೇಕಿದೆ.