200 ಕೋಟಿ ರೂಪಾಯಿ ಹಗರಣ: 6 ಗಂಟೆಗಳ ಕಾಲ ನೋರಾ ಫತೇಹಿ ಡ್ರಿಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

200 ಕೋಟಿ ರೂಪಾಯಿ ಹಗರಣದಲ್ಲಿ ದೆಹಲಿ ಪೊಲೀಸರು ಇಂದು ನೋರಾ ಫತೇಹಿಯನ್ನು 6 ಗಂಟೆಗಳ ಕಾಲ ಪ್ರಶ್ನಿಸಿದ್ದಾರೆ.

ಸುಕೇಶ್ ಚಂದ್ರಶೇಖರ್‌ಗೆ ಸಂಬಂಧಿಸಿದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ಆರ್ಥಿಕ ಅಪರಾಧಗಳ ವಿಭಾಗವು ಗುರುವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತು.

ಕಳೆದ ತಿಂಗಳು, ಸುಕೇಶ್ ಚಂದ್ರಶೇಖರ್ ಅವರನ್ನು ಒಳಗೊಂಡ ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿ ಚಾರ್ಜ್ ಶೀಟ್ ಸಲ್ಲಿಸಿತ್ತು. ನಂತರ ಅದೇ ಪ್ರಕರಣದಲ್ಲಿ ನೋರಾ ಫತೇಹಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!