ಮಹಿಳೆಯರಿಗೆ ತಿಂಗಳಿಗೆ 2,500 ರೂ, 300 ಯೂನಿಟ್‌ ಉಚಿತ ವಿದ್ಯುತ್: ಇದು ದೆಹಲಿ ಜನತೆಗೆ ಕಾಂಗ್ರೆಸ್ ಗ್ಯಾರಂಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಿಳೆಯರಿಗೆ ತಿಂಗಳಿಗೆ 2,500 ರೂ., ಸರ್ಕಾರಿ ಉದ್ಯೋಗಗಳಲ್ಲಿ ಶೇ. 33ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದೆ. ಹಾಗೇ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ.

ದೆಹಲಿಯ ಜನರಿಗೆ 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ಚಿಕಿತ್ಸೆ. ಯುವ ಮತದಾರರನ್ನು ಆಕರ್ಷಿಸುವ ಮೂಲಕ ಕಾಂಗ್ರೆಸ್ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ನೀಡುವುದಾಗಿ ಪ್ರತಿಜ್ಞೆ ಮಾಡಿದೆ. ಅಪ್ರೆಂಟಿಸ್‌ಶಿಪ್ ಸಮಯದಲ್ಲಿ ಯುವ ವೃತ್ತಿಪರರಿಗೆ ತಿಂಗಳಿಗೆ 8.500 ರೂ. ಸ್ಟೇಫಂಡ್ ಸಿಗುತ್ತದೆ.

ಮುಂಬರುವ ದೆಹಲಿ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಇಂದು ತನ್ನ ಪ್ರಣಾಳಿಕೆಯ ಎರಡನೇ ಭಾಗವನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಪ್ರಣಾಳಿಕೆಯನ್ನು ಬಹಿರಂಗಪಡಿಸಿದ್ದಾರೆ.

ಕಾಂಗ್ರೆಸ್ 500 ರೂ.ಗೆ ಸಬ್ಸಿಡಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದಾಗಿಯೂ ಭರವಸೆ ನೀಡಿದೆ. ಇದಲ್ಲದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿಯ ಕುಟುಂಬಗಳಿಗೆ 2 ಕೆ.ಜಿ ಸಕ್ಕರೆ, 1 ಕೆ.ಜಿ ಅಡುಗೆ ಎಣ್ಣೆ, 6 ಕೆ.ಜಿ ದ್ವಿದಳ ಧಾನ್ಯಗಳು ಮತ್ತು 250 ಗ್ರಾಂ ಚಹಾ ಎಲೆಗಳನ್ನು ಒಳಗೊಂಡ ಉಚಿತ ಪಡಿತರ ಕಿಟ್ ಅನ್ನು ಸಹ ನೀಡುವುದಾಗಿ ತಿಳಿಸಿದೆ.

ಪಿಂಚಣಿಯನ್ನು 2,500 ರಿಂದ 5,000 ರೂ.ಗೆ ಹೆಚ್ಚಿಸಲಾಗುವುದು. ವಿಧವೆಯರ ಹೆಣ್ಣುಮಕ್ಕಳ ಮದುವೆಗೆ 1.1 ಲಕ್ಷ ರೂ. ನೀಡಲಾಗುವುದು. ದೆಹಲಿಯಾದ್ಯಂತ 100 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ಕ್ಯಾಂಟೀನ್‌ಗಳಲ್ಲಿ ಒಂದು ಪ್ಲೇಟ್ ಊಟದ ಬೆಲೆ 5 ರೂ.ಗಳನ್ನು ನಿಗದಿಪಡಿಸಲಾಗುವುದು. 7.5 ಲಕ್ಷ ಬೀದಿ ವ್ಯಾಪಾರಿಗಳಿಗೆ ಉತ್ತಮ ಅವಕಾಶಗಳನ್ನು ನೀಡಲಾಗುವುದು. ದೆಹಲಿಯಲ್ಲಿ ಜಾತಿ ಜನಗಣತಿ ನಡೆಸಲಾಗುವುದು. ಪ್ರತಿ ವಾರ್ಡ್‌ನಲ್ಲಿ 24 ಗಂಟೆಗಳ ಔಷಧಾಲಯ, 10 ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳು ಮತ್ತು 25 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ರಕ್ಷಣೆ ಒದಗಿಸಲಾಗುವುದು. ವಿದ್ಯಾರ್ಥಿಗಳಿಗಾಗಿ 700 ಸಾರ್ವಜನಿಕ ಗ್ರಂಥಾಲಯಗಳನ್ನು ಸ್ಥಾಪಿಸಲಾಗುವುದು. ಯಮುನಾ ನದಿಯಲ್ಲಿ ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!