ಪ್ರತಿ ಟನ್ ಕಬ್ಬಿಗೆ 2800 ರೂ.: ಸಿಎಂ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈ ಬಿಟ್ಟ ರೈತರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ 53 ದಿನಗಳಿಂದ ಕಬ್ಬಿಗೆಸೂಕ್ತ ಬೆಲೆ ನಿಗದಿ ಮಾಡುವಂತೆ ಕಬ್ಬು ಬೆಳೆಗಾರರ ಹೋರಾಟ ನಡೆಸುತ್ತಿದ್ದು, ಇದೀಗ ಪ್ರತಿ ಟನ್ ಕಬ್ಬಿಗೆ 2,850 ರೂ. ದರ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಬೆಳೆಗಾರರ ಹೋರಾಟಕ್ಕೆ ಜಯ ಸಿಕ್ಕಿದೆ.
ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್​ನಲ್ಲಿ‌ ಬೆಳೆಗಾರರು ಪ್ರತಿಭಟನೆ ಮಾಡುತ್ತಿದ್ದರು. ಇಂದು ಸಿಎಂ ಬೊಮ್ಮಾಯಿ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಫೋನ್​ ಮಾಡಿ ಪ್ರತಿ ಟನ್ ಕಬ್ಬಿಗೆ 2,850 ರೂ. ಕೊಡಿಸುವುದಾಗಿ ತಿಳಿಸಿದರು.
ಬಳಿಕ ಎಡಿಸಿ ಮಹದೇವ ಮುರಗಿ ಹಾಗೂ ಜಮಖಂಡಿ ಎಸಿ ಸಿದ್ದು ಹುಲ್ಲಳ್ಳಿ ಪ್ರತಿಭಟನಾ ನಿರತರ ಸ್ಥಳಕ್ಕೆ ತೆರಳಿ ಮಾಹಿತಿ ನೀಡಿದ್ದಾರೆ. ಕಬ್ಬು ಬೆಳೆಗಾರರು ಹೋರಾಟ ಕೈ ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!