Thursday, December 25, 2025

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹಕ್ಕುದಾರರಿಲ್ಲದೆ ಬಾಕಿ ಉಳಿದಿದೆ 3,400 ಕೋಟಿ ರೂ. ಹಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಬ್ಯಾಂಕ್ ಖಾತೆಗಳಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಸುಮಾರು 3,400 ಕೋಟಿ ರೂಪಾಯಿಗಳಷ್ಟು ಹಕ್ಕುದಾರರಿಲ್ಲದ ಹಣ ಬಾಕಿ ಇದೆ ಎಂದು ಜಿಲ್ಲಾ ಸಮಾಲೋಚನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಈ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್‌ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅರುಣ್ ಕುಮಾರ್, ಕಳೆದ ಮೂರು ತಿಂಗಳಿನಿಂದ ಭಾರತೀಯ ರಿಸರ್ವ್ ಬ್ಯಾಂಕ್ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ ಅಡಿಯಲ್ಲಿ ಹಕ್ಕುದಾರರಿಲ್ಲದ ಠೇವಣಿಗಳನ್ನು ಅವುಗಳ ನಿಜವಾದ ಮಾಲೀಕರೊಂದಿಗೆ ಮತ್ತೆ ಸಂಪರ್ಕಿಸಲು ರಾಜ್ಯಾದ್ಯಂತ ವಿಶೇಷ ಅಭಿಯಾನವನ್ನು ಜಾರಿಗೊಳಸಿದೆ ಎಂದು ಹೇಳಿದರು.

ಡಿಸೆಂಬರ್ 31 ರವರೆಗೆ ಈ ಅಭಿಯಾನ ಮುಂದುವರಿಯುತ್ತದೆ. ಆದರೂ ಠೇವಣಿದಾರರು ಗಡುವಿನ ನಂತರವೂ ತಮ್ಮ ಹಣವನ್ನು ಪಡೆಯಲು ಬ್ಯಾಂಕುಗಳನ್ನು ಸಂಪರ್ಕಿಸಬಹುದು.

error: Content is protected !!